ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಚಾಲನೆ

Last Updated 21 ಜನವರಿ 2022, 14:06 IST
ಅಕ್ಷರ ಗಾತ್ರ

ಬೆಳಗಾವಿ: ಗ್ರಾಮೀಣ ಕ್ಷೇತ್ರದ ವಿವಿಧೆಡೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿದರು.

ಮಾಸ್ತಮರ್ಡಿ ಗ್ರಾಮದಲ್ಲಿ ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಅನುದಾನದಲ್ಲಿ ₹ 9.40 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಬಸವೇಶ್ವರ ದೇವಸ್ಥಾನ ಆವರಣಕ್ಕೆ ಫೇವರ್ಸ್ ಅಳವಡಿಕೆಗೆ ಪೂಜೆ ನೆರವೇರಿಸಿದರು.

ತಾರಿಹಾಳದಲ್ಲಿ ಡಾ.ಬಾಬು ಜಗಜೀವನರಾಂ ಭವನ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ₹ 10 ಲಕ್ಷ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ. ಪಂಚಾಯತ್‌ರಾಜ್ ಎಂಜಿನಿಯರಿಂಗ್‌ ವಿಭಾಗದಿಂದ ₹ 26.50 ಲಕ್ಷ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3 ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿದರು.

ಮುಖಂಡರಾದ ಸೂರಜ ಜಾಧವ್, ಯಲ್ಲಪ್ಪ ಗುಂಡದಡ್ಕರ, ನಾಮದೇವ ಜೋಗಣ್ಣವರ, ಬಸವರಾಜ ತಳವಾರ, ಲಕ್ಷ್ಮಣ ಮುಚ್ಚಂಡಿ ಇದ್ದರು.

ದೇವಿಗೆ ಹುಡಿ:ತಾಲ್ಲೂಕಿನ ಸುಳೇಭಾವಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶಾಸಕರು ಕುಟುಂಬ ಸಮೇತ ತೆರಳಿ ದೇವಿಗೆ ಉಡಿ ತುಂಬಿದರು.

ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ, ಪುತ್ರ ಮೃಣಾಲ ಮತ್ತು ಸೊಸೆ ನಂದಿನಿ ಜೊತೆ ತೆರಳಿ ಪೂಜೆ ಸಲ್ಲಿಸಿದರು. ದೇವಸ್ಥಾನ ಸಮಿತಿಯವರು ಅವರನ್ನು ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT