ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಡಬದಲ್ಲಿ ಆ್ಯಸಿಡ್‌ ದಾಳಿ: ಸೂಕ್ತ ಕ್ರಮಕ್ಕೆ ಸೂಚನೆ–ಲಕ್ಷ್ಮೀ ಹೆಬ್ಬಾಳಕರ

Published 4 ಮಾರ್ಚ್ 2024, 13:06 IST
Last Updated 4 ಮಾರ್ಚ್ 2024, 13:06 IST
ಅಕ್ಷರ ಗಾತ್ರ

ಬೆಳಗಾವಿ: ‘ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರವಾದದ್ದು. ಈ ಹೀನ ಕೃತ್ಯ ನಡೆಸಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

‘ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಆರೋಪಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸೂಕ್ತ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

‘ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಿಳೆಯರ ಸುರಕ್ಷತೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ಆಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಾಧ್ಯವಾದಷ್ಟು ಮುನ್ನಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT