ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ದಿ. ಸುರೇಶ ಅಂಗಡಿ ಅವರ ಪತ್ನಿ ಮಂಗಲಾಗೆ ಕೋವಿಡ್ ದೃಢ

Last Updated 27 ಏಪ್ರಿಲ್ 2021, 7:22 IST
ಅಕ್ಷರ ಗಾತ್ರ

ಬೆಳಗಾವಿ: ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಅವರ ಪತ್ನಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗೆ ಮಂಗಳವಾರ ಕೋವಿಡ್–19 ದೃಢಪಟ್ಟಿದೆ.

ಈ ವಿಷಯವನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಿಳಿಸಿದ್ದಾರೆ. ‘ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಆದರೂ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರೈಂಟೈನ್ ಆಗಿದ್ದೇನೆ. ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ವೈದ್ಯರ ಸಲಹೆ ಪಡೆಯಬೇಕು’ ಎಂದು ಕೋರಿದ್ದಾರೆ.

ಉಪ ಚುನಾವಣೆಯ ಮತ ಎಣಿಕೆ ಮೇ 2ರಂದು ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT