ಶನಿವಾರ, ಡಿಸೆಂಬರ್ 5, 2020
19 °C

ಬೆಳಗಾವಿ: ಕನ್ನಡ ರಾಜ್ಯೋತ್ಸವ ಸಂಭ್ರಮ ವೇಳೆ ಲಾಠಿ ಪ್ರಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಗುಂಪು ಗುಂಪಾಗಿ ಸೇರಿ ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಕೋವಿಡ್ ಕಾರಣದಿಂದಾಗಿ ಈ ಬಾರಿ ಮೆರವಣಿಗೆಗೆ ಅವಕಾಶ ನೀಡಿರಲಿಲ್ಲ. ಆದರೂ ಚನ್ನಮ್ಮ ವೃತ್ತದಲ್ಲಿ ನೂರಾರು ಮಂದಿ ಸೇರಿದ್ದರು. ಅಲ್ಲಲ್ಲಿ ಗುಂಪು ಗುಂಪಾಗಿ ನಿಂತಿದ್ದರು. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಬೀಸಿದರು. ಹೋಟೆಲ್‌ವೊಂದರ ಬಳಿ ನಿಂತಿದ್ದವರ ಮೇಲೂ ಪೊಲೀಸರು ಲಾಠಿ ಪ್ರಯೋಗಿಸಿದರು. ಈ ವೇಳೆ ತಪ್ಪಿಸಿಕೊಳ್ಳಲು ಓಡಿದ ಕೆಲವರು ಆಯತಪ್ಪಿ ಬಿದ್ದ ಘಟನೆಯೂ ನಡೆಯಿತು. ಪೊಲೀಸರು ದೂರದವರೆಗೂ ಓಡಿಸಿಕೊಂಡು ಹೋಗಿ ಗುಂಪು ಚದುರಿಸಿದರು.

ಕೆಲ ಕಿಡಿಗೇಡಿಗಳು ಮಹಾರಾಷ್ಟ್ರ ಸಾರಿಗೆ ಬಸ್ಸಿಗೆ ಕಲ್ಲು ತೂರಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದರು ಎನ್ನಲಾಗುತ್ತಿದೆ. ಆದರೆ ಅದನ್ನು ಪೊಲೀಸರು ನಿರಾಕರಿಸಿದ್ದಾರೆ. ಕೋವಿಡ್ ಮಾರ್ಗಸೂಚಿ ಪಾಲನೆಯಾಗದ ಕಾರಣ ಗುಂಪು ಚದುರಿಸಲಾಯಿತು ಎಂದು ತಿಳಿಸಿದರು.

ಪೊಲೀಸರ ಕ್ರಮ ಖಂಡಿಸಿ ಯುವಕರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಚುನಾವಣಾ ಪ್ರಚಾರಕ್ಕೆ ಅನುಮತಿ ಕೊಡಲಾಗುತ್ತದೆ. ಅಲ್ಲಿ ಕೋವಿಡ್ ಅನ್ವಯವಾಗುವುದಿಲ್ಲವೇ? ರಾಜ್ಯೋತ್ಸವ ಮೆರವಣಿಗೆ ಅವಕಾಶ ಕೊಡುವುದಿಲ್ಲವೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು