ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸತೀಶ ನಿರ್ಧಾರಗಳೇ ಹಿನ್ನಡೆಗೆ ಕಾರಣ: ಸವದಿ

Published 11 ಜೂನ್ 2024, 6:37 IST
Last Updated 11 ಜೂನ್ 2024, 6:37 IST
ಅಕ್ಷರ ಗಾತ್ರ

ಬೆಳಗಾವಿ: ‘ಲೋಕಸಭೆ ಚುನಾವಣೆಯಲ್ಲಿ ಅಥಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಆಗಲು ಅವರ (ಸತೀಶ ಜಾರಕಿಹೊಳಿ) ಕೆಲ ನಿರ್ಧಾರಗಳೇ ಕಾರಣ. ನಿರ್ವಹಣೆಯಲ್ಲಿ ಎಡವಿದ್ದಾರೆ. ಅವುಗಳನ್ನು ಬಹಿರಂಗವಾಗಿ ಹೇಳಲು ಆಗದು. ಪಕ್ಷದ ವೇದಿಕೆಯಲ್ಲಿ ಚರ್ಚಿಸುವೆ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಕೆಲ ಕ್ಷೇತ್ರಗಳಲ್ಲಿನ ಪಾರಂಪರಿಕ ಮತಗಳು ಆಯಾ ಪಕ್ಷ ಅಥವಾ ಆಯಾ ವ್ಯಕ್ತಿಗೆ ಮಾತ್ರ ಬರುತ್ತವೆ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು’ ಎಂದರು.

‘2018ರ ವಿಧಾನಸಭೆ ಚುನಾವಣೆಯಲ್ಲಿ ನಾನು ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತೆ. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಬಿಜೆಪಿಗೆ 36 ಸಾವಿರ ಮತಗಳ ಮುನ್ನಡೆ ಸಿಕ್ಕಿತು. ಇದಕ್ಕೆ ಅವರು ಏನು ಹೇಳುತ್ತಾರೆ’ ಎಂದು ಅವರು ಪ್ರಶ್ನಿಸಿದರು.

‘2023 ವಿಧಾನಸಭಾ ಚುನಾವಣೆಯಲ್ಲಿ ನಾನು 76 ಸಾವಿರ ಮತಗಳ ಅಂತರದಿಂದ ಗೆದ್ದು, ಕಾಂಗ್ರೆಸ್‌ ಶಾಸಕನಾದೆ. ಈಗ ಕಾಂಗ್ರೆಸ್‌ಗೆ 7,000 ಮತಗಳು ಕಡಿಮೆ ಬಂದಿವೆ ಎಂಬುದು ಅವರ ಆರೋಪ. ಎಲ್ಲ ಚರ್ಚೆಗೆ ಪಕ್ಷದ ವೇದಿಕೆಯೇ ಸೂಕ್ತ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT