ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ದೀಪ ಜನರೇ ಆರಿಸುತ್ತಾರೆ: ಲಕ್ಷ್ಮಣ ಸವದಿ

Last Updated 12 ಮಾರ್ಚ್ 2022, 15:24 IST
ಅಕ್ಷರ ಗಾತ್ರ

ಅಥಣಿ: ‘ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾಗಿದೆ. ಸದ್ಯ ಆ ಪಕ್ಷದ ಪರಿಸ್ಥಿತಿ ತಿನ್ ತೇರಾ, ನೌ ಅಟ್ರಾ ಆಗಿದೆ. ದೀಪದ ಎಣ್ಣೆ ಮುಗಿದಿದೆ. ಎಣ್ಣೆ ಮುಗಿದ ಮೇಲೆ ದೀಪ ನಂದಲೇಬೇಕು. ಎಲ್ಲದಕ್ಕೂ ಆಯಸ್ಸು ಇರುತ್ತದೆ. ಕಾಂಗ್ರೆಸ್‌ನ ಆಯಸ್ಸು ಮುಗಿದಿದೆ. ಜನರೇ ಆ ದೀಪ ಆರಿಸುತ್ತಿದ್ದಾರೆ’.

ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಬಗ್ಗೆ ಮೇಲಿನಂತೆ ಲೇವಡಿ ಮಾಡಿದರು.

ತಾಲ್ಲೂಕಿನ ಯಲಿಹಡಲಗಿ ಗ್ರಾಮದಲ್ಲಿ ರೈತರ ಮನೆಬಾಗಿಲಿಗೆ ಕಂದಾಯ ದಾಖಲೆಗಳು ಕಾರ್ಯಕ್ರಮ ಮತ್ತು ₹ 3 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹಗಲುಗನಸು ಕಾಣುವವನಲ್ಲ. ಹೈಕಮಾಂಡ್‌ ಸೂಚನೆಯಂತೆ ಮುಖ್ಯಮಂತ್ರಿ ನಡೆದುಕೊಳ್ಳುತ್ತಾರೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ’ ಎಂದರು.

‘ಬಸವರಾಜ ಬೊಮ್ಮಾಯಿ ಅವರು ಈ ಅವಧಿ ಪೂರ್ಣಗೊಳಿಸಲೆಂದು ಬಯಸುತ್ತೇನೆ. ಎಲ್ಲವನ್ನೂ ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT