ಬೆಳಗಾವಿ: ಇಲ್ಲಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

‘ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ಹೀಗಾಗಿ, ಅವರಿಗೆ ಇರುವ ಅನುಭವ ಮತ್ತು ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯ ಗಮನಿಸಿ ಈ ನೇಮಕ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ನನ್ನ ಮೇಲೆ ಸಂಪೂರ್ಣ ವಿಶ್ವಾಸವನ್ನಿಟ್ಟು ವಕ್ತಾರರನ್ನಾಗಿ ನೇಮಿಸಿದ ಅಧ್ಯಕ್ಷರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ. ನಿಷ್ಠಾವಂತ ಕಾರ್ಯಕರ್ತೆಯಾಗಿ ಪಕ್ಷದ ಏಳಿಗೆ ಹಾಗೂ ಜನರ ಹಿತಕ್ಕಾಗಿ ಸಿಪಾಯಿಯಂತೆ ಕೆಲಸ ಮಾಡುತ್ತೇನೆ. ವರಿಷ್ಠರೆಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.