ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಇನಾಮ್ ಗುಡಸ್ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿದರು.

₹20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ಗ್ರಾಮದ ದುರ್ಗಪ್ಪ ಪಾಟೀಲ ಅವರ ಮನೆಯಿಂದ ಕಲ್ಮೇಶ್ವರ ದೇವಸ್ಥಾನದ ಸಂಪರ್ಕ ಕಲಿಸುವ ₹30 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಸರ್ಕಾರಿ ಮರಾಠಿ ಶಾಲೆಗೆ ₹42.28 ಲಕ್ಷ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದರು.

‘ಕ್ಷೇತ್ರದ ಶಿಕ್ಷಣದ ಅಭಿವೃದ್ಧಿಗಾಗಿ ಪ್ರಯತ್ನ ಮೀರಿ ಅನುದಾನ ತರಲಾಗುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ನೂರಾರು ಸರ್ಕಾರಿ ಶಾಲೆಗಳ ನವೀಕರಣ ಜೊತೆಗೆ ಮೂಲಸೌಕರ್ಯ ಒದಗಿಸಿದ್ದೇನೆ’ ಎಂದು ಸಚಿವೆ ತಿಳಿಸಿದರು.

ಮುಖಂಡರಾದ ಯುವರಾಜ ಕದಂ, ಮನೋಹರ್ ಬೆಳಗಾಂವ್ಕರ್, ನಾರಾಯಣ ಪಾಟೀಲ, ಸಾಗರ ತೋರಾಳಕರ್, ಲಕ್ಷ್ಮಣ ಪಾಟೀಲ, ಗೀತೇಶ್ ತಾನಾಬ್, ಶಿವಾಜಿ ಪಾಟೀಲ, ಶಿವಾಜಿ ತಾನಾಬ್, ಜಯಪ್ಪ ಪಾಟೀಲ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.