ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಲಕ್ಷ್ಮಿ ಪುತ್ರನ ಮದುವೆಗೆ ಗಣ್ಯರ ದಂಡು

Last Updated 25 ನವೆಂಬರ್ 2020, 16:41 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಹೆಬ್ಬಾಳಕರ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾಪ್ಯಾಲೇಸ್‌ ಹೋಟೆಲ್‌ನಲ್ಲಿ ನ.27ರಂದು ಅದ್ಧೂರಿಯಾಗಿ ನಡೆಯಲಿದೆ.

‘ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಮೊದಲಾದ ನಾಯಕರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನೂ ಆಹ್ವಾನಿಸಿದ್ದೇವೆ’ ಎಂದು ಲಕ್ಷ್ಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ಕೆಲ ದಿನಗಳ ನಂತರ ಬೆಳಗಾವಿಯಲ್ಲಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಿ, ಇಲ್ಲಿನ ಬಂಧು–ಮಿತ್ರರು, ಕ್ಷೇತ್ರದ ಜನರನ್ನು ಆಹ್ವಾನಿಸುವ ಯೋಜನೆ ಆ ಕುಟುಂಬದ್ದಾಗಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT