ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಶಾಲೆಗಳಿಗೆ ಕಲಿಕಾ ಸಾಮಗ್ರಿ ವಿತರಣೆ

Last Updated 19 ಸೆಪ್ಟೆಂಬರ್ 2020, 13:02 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಸರ್ಕಾರಿ ಶಾಲೆ ನಂ.5ರಲ್ಲಿ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಲ್ಲಿ ಒದಗಿಸಲಾದ ಕಲಿಕಾ ಸಾಮಗ್ರಿಗಳನ್ನು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಶನಿವಾರ ವಿತರಿಸಿದರು.

‘ಕಳೆದ ವರ್ಷ ಅತಿವೃಷ್ಟಿಯಿಂದ ನಗರದಲ್ಲಿನ ಕೆಲವು ಶಾಲೆಗಳು ಹಾನಿಗೊಳಗಾಗಿದ್ದವು. ಇದರಿಂದ ಅಲ್ಲಿದ್ದ ಕಲಿಕಾ ಸಾಮಗ್ರಿಗಳು ಸಹ ಹಾಳಾಗಿದ್ದವು. ಅಂತಹ ಶಾಲೆಗಳಿಗೆ ಪುಸ್ತಕ, ಪೆನ್‌, ಬ್ಯಾಗ್‌ ಮೊದಲಾದ ಸಾಮಗ್ರಿಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಇದ್ದರು.

ನಿವಾಸಿಗಳೊಂದಿಗೆ ಚರ್ಚೆ: ಶಾಸಕರು ಶ್ರೀನಗರದ ಅಂಬೇಡ್ಕರ್‌ ಭವನ ಹಾಗೂ ವಂಟಮೂರಿ ಕಾಲೊನಿಯ ಅಂಬೇಡ್ಕರ್‌ ವೃತ್ತಕ್ಕೆ ಭೇಟಿ ನೀಡಿ ನಿವಾಸಿಗಳ ಕುಂದುಕೊರತೆ ಆಲಿಸಿದರು.

ವೃತ್ತದ ಅಭಿವೃದ್ಧಿ ಸೇರಿದಂತೆ ಇತರ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT