ಗೋಕಾಕ: ಜಂಗಮ ಸಮಾಜದ ಮಕ್ಕಳು ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚೆಚ್ಚು ಅಂಕಗಳನ್ನು ಗಳಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸಿ, ರಾಜ್ಯ ಮತ್ತು ದೇಶಕ್ಕಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ಇತರರಿಗೆ ಮಾದರಿಯಾಗಲಿ ಎಂದು ಸಂಘದ ಗೋಕಾಕ ತಾಲ್ಲೂಕು ಘಟಕ ಅಧ್ಯಕ್ಷ ಪ್ರಕಾಶ ಕಂಬಿ ಆಶಿಸಿದರು.

ನಗರ ಹೊರವಲಯದ ಜ್ಞಾನ ಮಂದಿರದ ಆಧ್ಯಾತ್ಮ ಕೇಂದ್ರದಲ್ಲಿ ಗೋಕಾಕ ತಾಲ್ಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ನಡೆದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ 80ಕ್ಕಿಂತ ಅಧಿಕ ಅಂಕ ಗಳಿಸಿದ ಜಂಗಮ ಸಮಾಜದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಹಕಾರಿ ಧುರೀಣ ಅಶೋಕ ಪೂಜೇರಿ ಮಾತನಾಡಿ, ಜಂಗಮ ಸಮಾಜದಲ್ಲಿ ಪ್ರತಿಭೆಗಳು ಸಾಕಷ್ಟಿದ್ದು ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಆರ್ಥಿಕ ನೆರವು ಬೇಕಿದೆ. ಈ ನಿಟ್ಟಿನಲ್ಲಿ ಜಂಗಮ ಕ್ಷೇಮಾಭಿವೃದ್ಧಿ ಸಂಘವು ಅಂಥವರಿಗೆ ನೆರವು ನೀಡುವ ಮೂಲಕ ಉತ್ತಮ ಕೆಲಸಮಾಡುತ್ತಿದೆ. ಅದಕ್ಕೆ ನಮ್ಮ ಸಹಾಯ ಸಹಕಾರ ಇದೆ ಎಂದರು.

ಕೇಂದ್ರದ ಧರ್ಮದರ್ಶಿನಿ ಸುವರ್ಣಾತಾಯಿ ಹೊಸಮಠ, ರವೀಂದ್ರ ಹಿರೇಮಠ, ಶೈಲಜಾ ಮಠದ, ಶಿಕ್ಷಕ ತೋರಣಗಟ್ಟಿ, ಜಂಗಮ ಸಮಾಜದ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.