ಶನಿವಾರ, ಸೆಪ್ಟೆಂಬರ್ 18, 2021
26 °C

ಗಡಿ ಸಮಸ್ಯೆ ಇತ್ಯರ್ಥಕ್ಕೆ ಎಂಇಎಸ್ ಪತ್ರ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಗಡಿ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಚಳವಳಿ ಆರಂಭಿಸುವ ಮೂಲಕ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯು ವಿವಾದವನ್ನು ಕೆಣಕಲು ಮುಂದಾಗಿದೆ.

ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ವಿವಿಧ ಗ್ರಾಮಗಳ ಗ್ರಾಮಸ್ಥರಿಂದ ಸಂಗ್ರಹಿಸಿದ 11ಸಾವಿರ ಪತ್ರಗಳನ್ನು ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ‘ಕ್ರಾಂತಿ ದಿನ’ದ ಅಂಗವಾಗಿ ಅಂಚೆ ಮೂಲಕ ಸೋಮವಾರ ರವಾನಿಸಿದರು.

‘ಪ್ರಧಾನಿ ಗಮನಸೆಳೆಯಲು ಈ ಚಳವಳಿ ಹಮ್ಮಿಕೊಂಡಿದ್ದೇವೆ. ವಿವಾದವನ್ನು ಕೂಡಲೇ ಬಗೆಹರಿಸಿ ನ್ಯಾಯ ದೊರಕಿಸಿಕೊಡಬೇಕು ಎನ್ನುವುದು ನಮ್ಮ ಆಗ್ರಹವಾಗಿದೆ’ ಎಂದು ಅವರು ತಿಳಿಸಿದರು. ಸ್ಥಳೀಯ ಕಾರ್ಯಕರ್ತರು ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು