ಬುಧವಾರ, ಜೂನ್ 29, 2022
26 °C

ಕೋರೆಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನ್ಯೂಯಾರ್ಕ್‍ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮೇ 21ರಂದು ನಡೆದ ಸಮಾರಂಭದಲ್ಲಿ ಅಮೆರಿಕದ ಇಂಡೊ–ಅಮೆರಿಕನ್ ಪ್ರೆಸ್ ಕ್ಲಬ್‍ನಿಂದ ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಗ್ರಾಮೀಣ ಜನರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆ ಒದಗಿಸುತ್ತಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.  ಭಾರತೀಯ ರಾಯಭಾರಿ ಕಚೇರಿಯ ಕನ್ಸೂಲ್ ಜನರಲ್‍ ರಣಧೀರ ಜೈಸ್ವಾಲ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಭಾರತೀಯ ಉದ್ಯಮಿ ಪ್ಯಾಮ್ ಕ್ವಾತ್ರಾ, ಬಿಲ್ ಡೆ ಬ್ಲಾಸಿಯೊ, ಝೇವಿಯರ್ ವಿಶ್ವವಿದ್ಯಾಲಯದ ಅಧ್ಯಕ್ಷ ರವಿಶಂಕರ ಭೂಪ್ಲಾಪುರ, ಡಾ.ದತ್ತಾತ್ರೇಯುಡು ನೋರಿ, ಇಂಡೊ–ಅಮೆರಿಕನ್ ಪ್ರೆಸ್ ಕ್ಲಬ್‍ ಕಾರ್ಯಾಧ್ಯಕ್ಷ ಕಮಲೇಶ್ ಮೆಹ್ತಾ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.