ಹಿರೇಬಾಗೇವಾಡಿ: ಸಮೀಪದ ಮುತ್ನಾಳ ಗ್ರಾಮದ ಕೇದಾರ ಶಾಖಾಪೀಠ ಹಿರೇಮಠದ ಶಿವಾನಂದ ಶಿವಾಚಾರ್ಯರು (65) ಭಾನುವಾರ ಬೆಳಗಿನ ಜಾವ ನಿಧನರಾದರು.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮುತ್ನಾಳದ ಹಿರೇಮಠ ಹಾಗೂ ಸವದತ್ತಿ ತಾಲ್ಲೂಕಿನ ಬೆಟಸೂರ ಮಠಕ್ಕೂ ಅವರು ಉತ್ತರಾಧಿಕಾರಿಯಾಗಿದ್ದರು. ನಿಧನರಾದ ನಂತರ ಬೆಟಸೂರಿನ ಮಠಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಿ, ಭಕ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ನಂತರ ಮುತ್ನಾಳದಲ್ಲಿ ಮೆರವಣಿಗೆ ನಡೆಸಿದ ನಂತರ, ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು.

ವಿವಿಧ ಮಠಾಧೀಶರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನ ಕೈಗೊಂಡು, ಮಠದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.