ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಮೆ ಮರುಪ್ರತಿಷ್ಠಾಪನೆಗೆ ಆಗ್ರಹ

Last Updated 10 ನವೆಂಬರ್ 2020, 11:56 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಬಿಜಗುಪ್ಪಿಯಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ರಾಷ್ಟ್ರೀಯ ಬಸವ ದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಜಿಲ್ಲಾ ಘಟಕದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಪ್ರತಿಮೆ ಭಗ್ನಗೊಳಿಸಿ ಅವಮಾನ ಮಾಡಿ, ಸಮಾಜದ ಸಾಮರಸ್ಯ ಕದಡುವ ದುಷ್ಟ ಶಕ್ತಿಗಳ ಹುನ್ನಾರವನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಸಮಾಜಘಾತುಕರನ್ನು ಮಟ್ಟ ಹಾಕಲು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಆ ಗ್ರಾಮದಲ್ಲಿ ಪ್ರತಿಮೆಯನ್ನು ಮರು ಪ್ರತಿಷ್ಠಾಪಿಸಬೇಕು’ ಎಂದು ಒತ್ತಾಯಿಸಿದರು.

‘ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಪ್ರತಿಮೆಗಳ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ವಿಶ್ವಗುರು ಬಸವ ಮಂಟಪದ ಅಧ್ಯಕ್ಷ ಪ್ರಭುಲಿಂಗ ಸ್ವಾಮೀಜಿ, ಲಿಂಗಾಯತ ಧರ್ಮ ಮಹಾಸಭಾದ ಅಧ್ಯಕ್ಷ ಮಹಾಂತೇಶ ಗುಡಸ, ಉಪಾಧ್ಯಕ್ಷ ಮಾರುತಿ ಗಡಗಲಿ, ರಾಷ್ಟ್ರೀಯ ಬಸವ ದಳ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಬಸವರಾಜ, ಉಪಾಧ್ಯಕ್ಷ ಅಶೋಕ ಬೆಂಡಿಗೇರಿ, ಕಾರ್ಯದರ್ಶಿ ಆನಂದ ಗುಡಸ, ವಿಶ್ವಗುರು ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಆಡಿನ, ಗಣಾಚಾರ ಸಂಚಾಲಕ ಶರಣ ಪ್ರಸಾದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT