ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

7

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

Published:
Updated:

ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ, ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ರಾಜ್ಯ ಚುನಾವಣಾ ಆಯೋಗವು, ಮೊದಲ ಹಂತದಲ್ಲಿ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆ. 29ರಂದು ಚುನಾವಣೆ ನಡೆಸುತ್ತಿದೆ. ಇವುಗಳ ಪೈಕಿ ಜಿಲ್ಲೆಯ 14 ಸಂಸ್ಥೆಗಳಿವೆ. ಈ ಪೈಕಿ, 2 ನಗರಸಭೆ, 2 ಪಟ್ಟಣ ಪಂಚಾಯ್ತಿ ಹಾಗೂ 10 ಪುರಸಭೆಗಳಾಗಿವೆ.

ಕಳೆದ ಬಾರಿ, ಗೋಕಾಕ ಮತ್ತು ನಿಪ್ಪಾಣಿ ನಗರಸಭೆಯಲ್ಲಿ ಯಾವುದೇ ಪಕ್ಷದ ಆಧಾರದ ಮೇಲೆ ಚುನಾವಣೆ ನಡೆದಿಲ್ಲ. ಗೋಕಾಕದಲ್ಲಿ ಕಾಂಗ್ರೆಸ್‌ ನಾಯಕ ರಮೇಶ ಜಾರಕಿಹೊಳಿ ಬೆಂಬಲಿಗರು ಅಧಿಕಾರದಲ್ಲಿದ್ದಾರೆ. ನಿಪ್ಪಾಣಿಯಲ್ಲಿ ಪಕ್ಷೇತರರು ಅಧಿಕಾರ ನಡೆಸುತ್ತಿದ್ದಾರೆ. ಹಾಗೆಯೇ, ಖಾನಾಪುರ ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್‌ ಪಕ್ಷವು, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಸದಸ್ಯರ ನೆರವಿನೊಂದಿಗೆ ಅಧಿಕಾರ ಹಿಡಿದಿದೆ.

ಲೋಕಸಭಾ ಚುನಾವಣೆಯು ಹೊಸ್ತಿಲಲ್ಲಿ ಇರುವುದರಿಂದ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೆಚ್ಚಿನ ಮಹತ್ವ ಬಂದಿದೆ. ಅಧಿಕಾರಕ್ಕಾಗಿ ಮೂರು ಪಕ್ಷಗಳಲ್ಲೂ (ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌) ಬಿರುಸಿನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ.

ಸಿದ್ಧವಿದ್ದೇವೆ:

ರಾಜ್ಯದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ. ಆದರೆ, ಈ ಹೊಂದಾಣಿಕೆಯನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಂದುವರಿಸಲಾಗುತ್ತದೆಯೇ, ಇಲ್ಲವೇ ಎನ್ನುವುದು ಇನ್ನೂ ಖಚಿತವಾಗಿಲ್ಲ. ‘ಹೊಂದಾಣಿಕೆಗೂ ಸೈ, ಸ್ವತಂತ್ರ ಸ್ಪರ್ಧೆಗೂ ಜೈ’ ಎಂದು ಇಲ್ಲಿನ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಾಯಕರು ತಿಳಿಸಿದರು. ‘ಚುನಾವಣೆಗೆ ಸಿದ್ಧವಾಗಿದ್ದೇವೆ. ಹೈಕಮಾಂಡ್‌ ನಿರ್ಧಾರದಂತೆ ಮುನ್ನಡೆಯುತ್ತೇವೆ’ ಎಂದು ಉಭಯ ಪಕ್ಷಗಳ ಮುಖಂಡರು ಸ್ಪಷ್ಟಪಡಿಸಿದರು.

ಈ 14 ಸ್ಥಳೀಯ ಸಂಸ್ಥೆಗಳಲ್ಲಿ, ಕಾಂಗ್ರೆಸ್‌–6, ಕಾಂಗ್ರೆಸ್‌–ಎಂಇಎಸ್‌ ಬೆಂಬಲಿತರು–1, ಬಿಜೆಪಿ–5, ಪಕ್ಷೇತರರು–2 ಸಂಸ್ಥೆಗಳಲ್ಲಿ ಅಧಿಕಾರ ನಡೆಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !