ಮಂಗಳವಾರ, ಆಗಸ್ಟ್ 4, 2020
22 °C

ಮಹಾರಾಷ್ಟ್ರ ಗಡಿಯ ಕೆಲ ಗ್ರಾಮಗಳಲ್ಲಿ ಸ್ವಯಂಪ್ರೇರಿತ ಲಾಕ್‌ಡೌನ್‌ಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೆಲಸಂಗ(ಬೆಳಗಾವಿ): ನೆರೆಯ ಮಹಾರಾಷ್ಟ್ರದ ಗಡಿ ಗ್ರಾಮ ಮತ್ತು ಅಥಣಿ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೆಲಸಂಗ ಕೊಟ್ಟಲಗಿ, ಕಕಮರಿ ಮೊದಲಾದ ಗ್ರಾಮಗಳಲ್ಲಿ ಜನರು ಸ್ವಯಂಪ್ರೇರಿತ ಲಾಕ್‍ಡೌನ್‍ಗೆ ಮುಂದಾಗಿದ್ದಾರೆ.

ಗ್ರಾಮದಲ್ಲಿ ಭಾನುವಾರ ಲಾಕ್‍ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಸೋಮವಾರದಿಂದ ಬೆಳಿಗ್ಗೆ 7ರಿಂದ 10ರವರೆಗೆ ವ್ಯಾಪಾರ ವಹಿವಾಟು ನಡೆಸಿ, ನಂತರ ಲಾಕ್‌ಡೌನ್‌ ಮಾಡಲು ಜನರು ನಿರ್ಧರಿಸಿದ್ದಾರೆ. ಗ್ರಾಮ ಪಂಚಾಯಿತಿಯಿಂದಲೂ ಈ ಸೂಚನೆ ನೀಡಲಾಗಿದೆ.

ಇಲ್ಲಿನ ‘ಮಂಗಳವಾರದ ಸಂತೆ’ ರದ್ದುಪಡಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಒಬ್ಬೊಬ್ಬರೆ ಬರಬೇಕು. ಮಾಸ್ಕ್‌ ಧರಿಸಿರಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು