ಭಾನುವಾರ, ಆಗಸ್ಟ್ 1, 2021
27 °C

ಬೆಳಗಾವಿಯ 5 ತಾಲ್ಲೂಕುಗಳಲ್ಲಿ ಇಂದಿನಿಂದ ಲಾಕ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಇದೇ 14ರಿಂದ 22ರವರೆಗೆ ಲಾಕ್‌ಡೌನ್‌ ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಲಾಕ್‌ಡೌನ್‌ ಮಾಡುವ ನಿರ್ಧಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಎಂ.ಜಿ. ಹಿರೇಮಠ ಅವರು, ಇಡೀಯಾಗಿ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಲಾರದೇ  ಆಯ್ದ 5 ತಾಲ್ಲೂಕುಗಳನ್ನು ಮಾತ್ರ ಮಾಡಿದ್ದಾರೆ.

‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಗಡಿಗೆ ಹೊಂದಿಕೊಂಡಿರುವ ಹಾಗೂ ಕೊರೊನಾ ಹೆಚ್ಚು ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಲಾಕ್‌ಡೌನ್‌ ಮಾಡುವ ನಿರ್ಧಾರ ಕೈಗೊಂಡಿದ್ದೇವೆ. 14ರ ರಾತ್ರಿ 8 ಗಂಟೆಯಿಂದ 22ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್‌ ಮಾಡಲಾಗುವುದು’ ಎಂದು ಹೇಳಿದರು.

‘ಲಾಕ್‌ಡೌನ್‌ ಅವಧಿಯಲ್ಲಿ ಜೀವನಾವಶ್ಯಕ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಕಾರ್ಯಚಟುವಟಿಕೆಗಳ ಮೇಲೆ ನಿರ್ಬಂಧ ಇರುತ್ತದೆ. ವಾಹನಗಳ ಓಡಾಟ, ಸಾರ್ವಜನಿಕರ ಓಡಾಟದ ಮೇಲೂ ನಿರ್ಬಂಧ ಹೇರಲಾಗುತ್ತದೆ. ಲಾಕ್‌ಡೌನ್‌ ಉಲ್ಲಂಘಿಸಿ, ಅನಾವಶ್ಯಕವಾಗಿ ತಿರುಗಾಡುವವರು ಕಂಡುಬಂದರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು