ಗೋಕಾಕ: ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 30,886 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹6,06,18,201 ಮೊತ್ತದ ವಹಿವಾಟುಗಳನ್ನು ವ್ಯಾಜ್ಯ ಮುಕ್ತಗೊಳಿಸಲಾಯಿತು.

ಇಲ್ಲಿನ 12ನೇ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಉಮೇಶ ಆತ್ನೂರೆ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾದೇವ ಕಾನಟ್ಟಿ, ಪ್ರಧಾನ ಜೆಎಂಎಫ್ಸಿ ನ್ಯಾಯಾಧೀಶ ರಾಜೀವ ಗೋಳಸಾರ, 1ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಧೀಶೆ ಸೂರ್ಯಪ್ರಭಾ ಎಚ್.ಡಿ. ಹಾಗೂ 2ನೇ ಜೆಎಂಎಫ್ಸಿ ನ್ಯಾಯಾಧೀಶೆ ರೂಪಾ ಮಟ್ಟಿ, ಮೂಡಲಗಿ ಜೆಎಂಎಫ್ಸಿ ನ್ಯಾಯಾಧೀಶೆ ಜ್ಯೋತಿ ಪಾಟೀಲ ನೇತೃತ್ವದಲ್ಲಿ ಲೋಕ ಅದಾಲತ್ ನಡೆಯಿತು.

12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ 22, ಹಿರಿಯ ಪ್ರಧಾನ ಸಿವಿಲ್ ನ್ಯಾಯಾಲಯದ 11, ಹಿರಿಯ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ 11, ಹಿರಿಯ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ 8, ಪ್ರಧಾನ ಜೆಎಂಎಫ್ಸಿ ನ್ಯಾಯಾಲಯದ 596, 1ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ 1,172, 2ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಲಯದ 560 ಹಾಗೂ ಮೂಡಲಗಿ ಜೆಎಂಎಫ್ಸಿ ನ್ಯಾಯಾಲಯದ 1,661 ಪ್ರಕರಣಗಳು ಸೇರಿದಂತೆ 4,041 ಹಾಗೂ ನಗರಸಭೆ, ಹೆಸ್ಕಾಂ, ದೂರವಾಣಿ, ಅರಣ್ಯ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು, ಕಂದಾಯ ವಸೂಲಾತಿ, ರಾಷ್ಟ್ರೀಕೃತ ಬ್ಯಾಂಕಗಳ ಸುಮಾರು 26,845 (ಪಿ.ಎಲ್.ಸಿ.) ವ್ಯಾಜ್ಯ ಪೂರ್ವ ಪ್ರಕರಣ ಸೇರಿದಂತೆ ಒಟ್ಟು 30,886 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದು ತಾಲ್ಲೂಕು ಕಾನೂನು ಸೇವೆಗಳ ಸಮಿತಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.