ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ: ಮಹಾಂತೇಶ ಕವಟಗಿಮಠ

Published 11 ಏಪ್ರಿಲ್ 2024, 14:21 IST
Last Updated 11 ಏಪ್ರಿಲ್ 2024, 14:21 IST
ಅಕ್ಷರ ಗಾತ್ರ

ಸತ್ತಿಗೇರಿ: ‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದಲೇ ಭಾರತ ದೇಶವು ಸದೃಢವಾಗಿ, ಸುಭದ್ರವಾಗಿ ಅಭಿವೃದ್ಧಿ ರಾಷ್ಟ್ರವಾಗಿ, ವಿಶ್ವಗುರು ಸ್ಥಾನದತ್ತ ಧಾಪುಗಾಲಿಟ್ಟಿದೆ’ ಎಂದು ಬಿಜೆಪಿ ಮುಖಂಡ ಮಹಾಂತೇಶ ಕವಟಗಿಮಠ ಹೇಳಿದರು.

ಸತ್ತಿಗೇರಿ ಗ್ರಾಮದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ‘ಮೋದಿ ಅವರ ಕೈ ಮತ್ತೊಮ್ಮೆ ಬಲಪಡಿಸಲು ಬಿಜೆಪಿಗೆ ಮತ ಹಾಕಿ’ ಎಂದರು.

ಅಭ್ಯರ್ಥಿ ಜಗದೀಶ ಶೆಟ್ಟರ್‌ ಮಾತನಾಡಿ, ‘ನರೇಂದ್ರ ಮೋದಿ ಅವರ ನಾಯಕತ್ವವನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಸತತ ಎರಡನೇ ಬಾರಿ ಪ್ರಧಾನಿಯಾಗಿರುವ ಅವರು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ’ ಎಂದರು.

‘ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ನಮ್ಮೆಲ್ಲರ ಕರ್ತವ್ಯ. ಜನರಿಗಾಗಿ ಅವರು ತಂದಂತಹ ಯೋಜನೆಗಳನ್ನು ಮನೆ-ಮನೆಗೆ ತಲುಪಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಜೀತಕುಮಾರ ದೇಸಾಯಿ, ಯಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಜೆಡಿಎಸ್ ಮುಖಂಡರಾದ ಪಂಚನಗೌಡ ದ್ಯಾಮನಗೌಡ್ರ, ಸೌರಭ ಚೋಪ್ರಾ, ಮೋಹನ್ ಗುರುಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪರ್ವತಗೌಡ ಪಾಟೀಲ, ಬಸನಗೌಡ ಪಾಟೀಲ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಚಂದರಗಿ, ಪಿಕೆಪಿಎಸ್ ಅಧ್ಯಕ್ಷ ಮಹಾಂತೇಶ ಗೋಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗೌಡಪ್ಪ ಸವದತ್ತಿ, ಉಪಾಧ್ಯಕ್ಷ ಗುರು ವಾಲಿ, ಜಗದೀಶ ಮೆಟಗುಡ್ಡ, ಈರಣ್ಣ ಹೊಸಮನಿ, ಮಹಾದೇವ ಯಂಡ್ರಾವಿ, ಚಂದ್ರಶೇಖರ ಸವದತ್ತಿ, ಆನಂದ ಬಾಗೋಡಿ, ನವೀನ ನಿಶಾನಮಠ, ಚೇತನ ಜಕಾತಿ, ರಾಜು ಸಾಲಿಮಠ ಸೇರಿದಂತೆ ಅನೇಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT