ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಡವರ ಪರವಾಗಿರುವುದು ಕಾಂಗ್ರೆಸ್‌ ಮಾತ್ರ: ಪ್ರಿಯಂಕಾ ಜಾರಕಿಹೊಳಿ

Published 11 ಏಪ್ರಿಲ್ 2024, 14:23 IST
Last Updated 11 ಏಪ್ರಿಲ್ 2024, 14:23 IST
ಅಕ್ಷರ ಗಾತ್ರ

ಹುಕ್ಕೇರಿ: ‘ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವುದು ಕಾಂಗ್ರೆಸ್ ಪಕ್ಷ. ಹೀಗಾಗಿ ಮೇ 7ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು.

ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಬೆನಕನಹೊಳಿ, ಕೇರಿಮಾಸ್ತಿಹೊಳಿ, ನರಸಿಂಗಪೂರ, ಮಜತಿ, ಮಾನಗಾಂವ ಗ್ರಾಮಗಳಲ್ಲಿ ಮತಯಾಚಿಸಿ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

‘ಮತಕ್ಷೇತ್ರದಲ್ಲಿ ಈಗಾಗಲೇ ನಮ್ಮ ತಂದೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. 15 ವರ್ಷಗಳ ಅವಧಿಯಲ್ಲಿ ಮತಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶಾಲೆ, ಕಾಲೇಜು ನಿರ್ಮಿಸಿ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ನನಗೂ ಇಂಥ ಅವಕಾಶ ಕೊಡಬೇಕು’ ಎಂದರು.

‘ಬಿಜೆಪಿಯಿಂದ ಜೊಲ್ಲೆ ಸಂಸದರಾದರೂ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ರೈತರ ಬಗ್ಗೆ ಕಾಳಜಿ ಇಲ್ಲದ ಸಂಸದರಾಗಿದ್ದಾರೆ’ ಎಂದು ಆರೋಪಿಸಿದರು.

ಅರ್ಜುನ್ ಘಸ್ತಿ, ಬಸು ದರನತಿ, ಸುರೇಶ ನಾಯ್ಕ, ಸತೀಶ ನಾಯ್ಕ, ಮಾರುತಿ ಘಸ್ತಿ, ಕಾಡೇಶ ಮೇಕಾಲಿ, ಕಮಲವ್ವ ವಾಲೀಕಾರ, ಯಲ್ಲವ್ವ ಕೋಳಿ, ಬಸು ವಾಲಿಕರ, ರಾಮಗೊಂಡ, ಬಾಳೇಶ ಮಾವನೂರೆ ಸೇರಿದಂತೆ ವಿವಿಧ ಗ್ರಾಮದ ಹಿರಿಯ ಮುಖಂಡರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT