ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರು ಈ ಬಾರಿ 'ಕೈ' ಗೆ ಶಕ್ತಿ ನೀಡಿ: ಪ್ರಿಯಾಂಕಾ ಜಾರಕಿಹೊಳಿ

Published 20 ಏಪ್ರಿಲ್ 2024, 15:36 IST
Last Updated 20 ಏಪ್ರಿಲ್ 2024, 15:36 IST
ಅಕ್ಷರ ಗಾತ್ರ

ಯಮಕನಮರಡಿ: ಮತದಾರರು ದೃಢ ನಿರ್ಧಾರ ಮಾಡಿ ಈ ಬಾರಿ ಕೈಗೆ ಶಕ್ತಿ ನೀಡಬೇಕು ಎಂದು  ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮನವಿ ಮಾಡಿದರು.

ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸೂರ, ಗುಗ್ರ್ಯಾನಟ್ಟಿ, ಭೂತರಮನಹಟ್ಟಿ, ಗೋಡಿವಾಳ, ಉಕ್ಕಡ-ರಾಮದುರ್ಗ, ಬೊಮ್ಮನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಬಿಜೆಪಿ ಕೊಟ್ಟ ಭರವಸೆ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಪ್ರತಿ ಮಹಿಳೆಯರಿಗೆ ₹1ಲಕ್ಷ ಕೊಡ್ತೇವೆ ಎಂದು ಈಗಾಗಲೇ ಮಲ್ಲಿಕಾಜರ್ುನ ಖರ್ಗೆ ಹಾಗೂ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಬಡವರ ದಲಿತರ ಬಗ್ಗೆ ಇರುವ ಕಾಳಜಿ’ ಎಂದರು.

ಪ್ರಚಾರದ ವೇಳೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮಹಿಳೆಯರು ಆರತಿ ಎತ್ತಿ, ಹೂ ಮಾಲೆ ಹಾಕಿ ಸನ್ಮಾನಿಸಿದರು. ಗ್ರಾಮದ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT