ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೊಂದು ಸುತ್ತಿನ ಚರ್ಚೆ ಬಳಿಕ ಅಭ್ಯರ್ಥಿಗಳ ಆಯ್ಕೆ ಅಂತಿಮ ಸಾಧ್ಯತೆ: ಜಾರಕಿಹೊಳಿ

Published 17 ಮಾರ್ಚ್ 2024, 13:13 IST
Last Updated 17 ಮಾರ್ಚ್ 2024, 13:13 IST
ಅಕ್ಷರ ಗಾತ್ರ

ಗೋಕಾಕ: ಇನ್ನೊಂದು ಸುತ್ತಿನ ಚರ್ಚೆಯ ಬಳಿಕ ಬೆಳಗಾವಿ-ಚಿಕ್ಕೋಡಿ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತ ತಲುಪುವ ಸಾಧ್ಯತೆಗಳಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರ ಹೆಸರು ಅಂತಿಮಗೊಳಿಸಲಾಗಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿ ಮಾತನಾಡಿದರು.

ಇನ್ನೆರಡು-ಮೂರು ದಿನಗಳಲ್ಲಿ ಪಕ್ಷದ ರಾಜ್ಯ ಮುಖ್ಯಸ್ಥರು ಹಾಗೂ ಪ್ರಮುಖರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಮೃಣಾಲ ಹೆಬ್ಬಾಳಕರ, ಪ್ರಿಯಾಂಕಾ ಜಾರಕಿಹೊಳಿ ಮತ್ತಿತರ ಟಿಕೆಟ್ ಆಕಾಂಕ್ಷಿಗಳ ಕುರಿತು ಇದೇ ಮಾರ್ಚ್‌ 21 ಅಥವಾ ಅದಕ್ಕೂ ಪೂರ್ವದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT