ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ ಕಾಂಗ್ರೆಸ್‌ ಟಿಕೆಟ್‌: ಸಚಿವರಿಂದ ಅಭಿಪ್ರಾಯ ಸಂಗ್ರಹ

Published 17 ಮಾರ್ಚ್ 2024, 16:23 IST
Last Updated 17 ಮಾರ್ಚ್ 2024, 16:23 IST
ಅಕ್ಷರ ಗಾತ್ರ

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಯಾರಿಗೆ ನೀಡಿದರೆ ಸೂಕ್ತ ಎಂಬ ವಿಚಾರವಾಗಿ, ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಜಿಲ್ಲಾಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯ ಸಂಗ್ರಹಿಸಿದರು.

ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಯಾರಿಗೆ ಟಿಕೆಟ್‌ ಕೊಟ್ಟರೆ ಗೆಲ್ಲಬಹುದು ಎಂಬಿತ್ಯಾದಿ ವಿಷಯಗಳ ಕುರಿತು ಚರ್ಚಿಸಲಾಯಿತು. ನಂತರ ತಾಲ್ಲೂಕಿನ ಯಕ್ಸಂಬಾದಲ್ಲಿರುವ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರ ನಿವಾಸಕ್ಕೆ ಸತೀಶ ತೆರಳಿ ಗೋಪ್ಯವಾಗಿ ಚರ್ಚಿಸಿದರು.

ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕರಾದ ಮೋಹನ ಶಹಾ, ಎಸ್.ಬಿ. ಘಾಟಗೆ, ಕಾಕಾಸಾಹೇಬ ಪಾಟೀಲ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮಹಾವೀರ ಮೋಹಿತೆ, ಡಾ.ಎನ್.ಎ. ಮಗದುಮ್ಮ, ಎಚ್.ಎಸ್.ನಸಲಾಪುರೆ ಇದ್ದರು.

ನಂತರ ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್‌, ರಾಯಬಾಗ ತಾಲ್ಲೂಕಿನ ಕುಡಚಿ, ಹಾರೂಗೇರಿಗೆ ಸಚಿವರು ತೆರಳಿ, ಸಭೆ ನಡೆಸಿದರು. ಶಾಸಕರಾದ ರಾಜು ಕಾಗೆ, ಮಹೇಂದ್ರ ತಮ್ಮಣ್ಣವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT