ಬೆಳಗಾವಿ: ‘ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳ ಕುರಿತು ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಬೆಂಗಳೂರಿನ ಕಾವೇರಿಯಲ್ಲಿ ಶುಕ್ರವಾರ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ 80ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ವರದಿ ಸಮೀಕ್ಷೆಗಳಿಂದ ಬಂದಿವೆ’ ಎಂದರು.

‘ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ₹6,000 ಕೊಡುತ್ತಿರುವ ಮತ್ತು ವರ್ಷಕ್ಕೆ ₹50 ಸಾವಿರದಷ್ಟು ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿರಿ. ಜನರ ನಡುವೆ ಗಟ್ಟಿಯಾಗಿ ನಿಂತರೆ ಗೆಲುವು ಸುಲಭ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ‘ಬೆಳಗಾವಿಯಲ್ಲಿ ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ’ ಎಂದರು.

ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರ ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಆ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಅಲ್ಲೂ ಗೆಲುವಿನ ಅವಕಾಶಗಳು ಇವೆ’ ಎಂದು ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಚಿವ ಸತೀಶ ಜಾರಕಿಹೊಳಿ, ಶಾಸಕ ಲಕ್ಷ್ಮಣ ಸವದಿ ಮತ್ತು ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಡಿಸಿಎಂ ಭೇಟಿ: ಜಿಲ್ಲೆಯ ನಾಯಕರ ತಂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೂ ಭೇಟಿ ಮಾಡಿತು. ‘ಜಿಲ್ಲೆಯಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎನ್ನುವುದು ನಮ್ಮ ಸಮೀಕ್ಷೆಗಳಿಂದ ಸ್ಪಷ್ಟವಾಗಿದೆ’ ಎಂದು ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಪ್ರತಿಬಾರಿ ಒಂದೊಂದು ಅಲೆ ನಂಬಿಕೊಳ್ಳುವ ಬಿಜೆಪಿಗೆ ಈ ಬಾರಿ ಯಾವ ಅಲೆಯೂ ಇಲ್ಲ. ಈಗ ಏನಿದ್ದರೂ ಕಾಂಗ್ರೆಸ್ ಅಲೆ. ಗ್ಯಾರಂಟಿಗಳ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಿರುವ ಕಾಂಗ್ರೆಸ್ ಪಕ್ಷವನ್ನು ಜನರು ಬೆಂಬಲಿಸಲಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.