ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೃಹತ್ ಲೋಕ ಅದಾಲತ್ 30ರಂದು

Last Updated 16 ಸೆಪ್ಟೆಂಬರ್ 2021, 8:24 IST
ಅಕ್ಷರ ಗಾತ್ರ

ಬೆಳಗಾವಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಸೆ.30ರಂದು ಬೃಹತ್ ಲೋಕ ಅದಾಲತ್ ಅನ್ನು ಸೆ.30ರಂದು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಸಿ.ಎಂ. ಜೋಶಿ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧೀಶರ ಹಾಗೂ ವಕೀಲರ ಸಹಯೋಗದಲ್ಲಿ ಅದಾಲತ್ ನಡೆಯಲಿದೆ. ವೈವಾಹಿಕ, ಕೌಟುಂಬಿಕ, ಬ್ಯಾಂಕ್‌ಗಳಿಗೆ ಸಂಬಂಧಿಸಿದ ಪ್ರಕರಣಗಳು, ಚೆಕ್ ಬೌನ್ಸ್‌, ಭಾರತ ದಂಡ ಸಂಹಿತೆಯ ರಾಜಿ ಆಗಬಲ್ಲವು, ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು, ಮೋಟಾರ್ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಪಟ್ಟವು, ಕಂದಾಯ ಸೇರಿದಂತೆ ಎಲ್ಲ ರೀತಿಯ ರಾಜಿ ಆಗಬಹುದಾದ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಇಚ್ಛಿಸಿದಲ್ಲಿ ಮುಂಚಿತವಾಗಿ ಕಾನೂನು ಸೇವೆಗಳ ಸಮಿತಿಗಳಿಗೆ ಆನ್‌ಲೈನ್‌ ಅಥವಾ ಇ-ಮೇಲ್, ಎಸ್‌ಎಂಎಸ್, ವಾಟ್ಸ್ ಆ್ಯಪ್‌ ಮಾಡಿ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಮಾಹಿತಿ ಪಡೆಯಬಹುದು. ಬ್ಯಾಂಕ್‌ಗಳು, ಕಕ್ಷಿದಾರರು ಹಾಗೂ ಜನಸಾಮಾನ್ಯರು ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ಆಸಕ್ತರು ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0831-2423216 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT