ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾಸಾಹೇಬ ಜೊಲ್ಲೆಗೆ ಬೆಂಬಲ: ಪ್ರತಾಪರಾವ್ ಪಾಟೀಲ

Published 20 ಏಪ್ರಿಲ್ 2024, 16:05 IST
Last Updated 20 ಏಪ್ರಿಲ್ 2024, 16:05 IST
ಅಕ್ಷರ ಗಾತ್ರ

ರಾಯಬಾಗ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ ಹೇಳಿದರು.

ತಾಲ್ಲೂಕಿನ ಬ್ಯಾಕುಡ ಗ್ರಾಮಕ್ಕೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆಯವರನ್ನು ಸ್ವಾಗತಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿಯನ್ನಾಗಿಸುವ ಉದ್ದೇಶದಿಂದ  ಬಿಜೆಪಿಗೆ ಬೆಂಬಲಿಸಲಿದ್ದೇವೆ ಎಂದರು.

ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಜೆಡಿಎಸ್ ರಾಷ್ಟ್ತ್ರೀಯ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ ಹಾಗೂ ಪುತ್ರ ಶಿವರಾಜ್ ಪಾಟೀಲರ ಬೆಂಬಲದಿಂದ ಪಕ್ಷಕ್ಕೆ, ನನಗೆ ಆನೆ ಬಲ ಬಂದಂತಾಗಿದೆ’ ಎಂದರು.

ಈ ಸಂದರ್ಭದಲ್ಲಿ ಶಿವರಾಜ್ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಅಂಬುಪ್ರಸಾದ ನರೋಟೆ, ವಕೀಲರಾದ ಪಿ.ಎಂ.ಪಾಟೀಲ ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT