ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಿಯಾಂಕಾ ಜಾರಕಿಹೊಳಿ ಪರ ಲಕ್ಷ್ಮಣ ಸವದಿ ರೋಡ್‌ ಶೋ

Published 5 ಮೇ 2024, 16:10 IST
Last Updated 5 ಮೇ 2024, 16:10 IST
ಅಕ್ಷರ ಗಾತ್ರ

ಅಥಣಿ‌: ಪಟ್ಟಣದಲ್ಲಿ ಭಾನುವಾರ ಶಾಸಕ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಬೃಹತ್‌ ರೋಡ್ ಶೋ ನಡೆಸಿದರು.

ತೆರೆದ ವಾಹನದಲ್ಲಿ ನಿಂತ ಪ್ರಿಯಾಂಕಾ ಹಾಗೂ ಲಕ್ಷ್ಮಣ ಅವದಿ ಅವರನ್ನು ಕಂಡು ಜನ ಜೈಕಾರ ಹಾಕಿದರು. ಇದಕ್ಕೂ ಮುನ್ನ ಸಿದ್ದೇಶ್ವರ ದೇವಸ್ಥಾನ, ಗಚ್ಚಿನ ಮಠಕ್ಕೆ ಭೇಟಿ‌ ನೀಡಿ ಆಶೀರ್ವಾದ ಪಡೆದರು. ಬಸವೇಶ್ವರ ಹಾಗೂ ಸಂಗೊಳ್ಳಿ ರಾಯಣ್ಣ ಮೂರ್ತಿಗಳಿಗೂ ಪುಷ್ಪ ನಮನ ಸಲ್ಲಿಸಿದರು.

ಕೆಪಿಸಿಸಿ ಸದಸ್ಯ ದಿಗ್ವಿಜಯ ಪವಾರ ದೇಸಾಯಿ, ಕಾಂಗ್ರೆಸ್‌ ಪಕ್ಷದ ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ, ರಮೇಶ ಸಿಂದಗಿ, ಸದಾಶಿವ ಬೂಟಾಳೆ ಸೇರಿದಂತೆ ನೂರಾರೂ ಕಾಂಗ್ರೆಸ್‌ ಕಾರ್ಯಕರ್ತರು, ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT