ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ಮೆಚ್ಚುವ ಆಡಳಿತ ನೀಡಿದ್ದು ಮೋದಿ: ಪ್ರಭಾಕರ ಕೋರೆ

Published 4 ಮೇ 2024, 4:49 IST
Last Updated 4 ಮೇ 2024, 4:49 IST
ಅಕ್ಷರ ಗಾತ್ರ

ಚಿಕ್ಕೋಡಿ: ‘10 ವರ್ಷದ ಅವಧಿಯಲ್ಲಿ ಭಾರತೀಯರು ಮೆಚ್ಚುವಂತಹ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ. 370 ಕಲಂ ರದ್ದುಗೊಳಿಸಿ ಭಾರತದ ಏಕತೆ ಗಟ್ಟಿಗೊಳಿಸಿದ್ದಾರೆ. ಭಾರತವನ್ನು ವಿಶ್ವಗುರುವಾಗಿಸಲು ಪ್ರಧಾನಿ ಮೋದಿ ಕೊಡುಗೆ ಅಪಾರ’ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.

ತಾಲ್ಲೂಕಿನ ಕೇರೂರ ಮತ್ತು ಮಾಂಜರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಬುಧವಾರ ಮತಯಾಚನೆ ಮಾಡಿ ಮಾತನಾಡಿದ ಅವರು, ‘ರೈತರ ಸಂಕಷ್ಟಕ್ಕೆ ಸ್ಪಂದಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ವರ್ಷಕ್ಕೆ 6 ಸಾವಿರ ಕೊಟ್ಟರೆ, ಯಡಿಯೂರಪ್ಪನವರು ಮುಖ್ಯಮಂತ್ರಿ ಇದ್ದಾಗ ರಾಜ್ಯ ಸರ್ಕಾರದಿಂದ - 4 ಸಾವಿರ ಕೊಡುತ್ತಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ರೈತರಿಗೆ ನೀಡುತ್ತಿದ್ದ 4 ಸಾವಿರ ಬಂದ್ ಮಾಡಿತು’ ಎಂದು ಆರೋಪಿಸಿದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು. ಮಾಜಿ ಶಾಸಕರಾದ ಕಲ್ಲಪ್ಪ ಮಗ್ಗೆನವರ, ಬಾಳಾಸಾಹೇಬ ವಡ್ಡರ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಅಜಿತರಾವ್ ದೇಸಾಯಿ, ಮಹಾವೀರ ಕಾತ್ರಾಳೆ, ದತ್ತ ಶೇತ್ಕರಿ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಹಮಾರಿ ಯಾದವ, ಸುರೇಶ ಪಾಟೀಲ, ಸನತ್ ಕುಮಾರ್ ಪಾಟೀಲ ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT