ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕರೂಪದ ಕಾನೂನಿಗಾಗಿ ಬಿಜೆಪಿ ಗೆಲ್ಲಿಸಿ: ಸಂಜಯ ಪಾಟೀಲ

Published 25 ಏಪ್ರಿಲ್ 2024, 4:23 IST
Last Updated 25 ಏಪ್ರಿಲ್ 2024, 4:23 IST
ಅಕ್ಷರ ಗಾತ್ರ

ಚಿಕ್ಕೋಡಿ: ‘ಭಾರತೀಯ ಸಂಸ್ಕೃತಿ, ಹಿಂದೂ ಸಂಸ್ಕೃತಿ ಉಳಿಯಲು ದೇಶದಲ್ಲಿ ಏಕರೂಪದ ನಾಗರಿಕ ಕಾನೂನು ಅಗತ್ಯ. ಅದಕ್ಕೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು’ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಹೇಳಿದರು.

ತಾಲ್ಲೂಕಿನ ಸದಲಗಾ ಪಟ್ಟಣದಲ್ಲಿ ಬುಧವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ‘ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಆಡಳಿತ ಮಾಡಿದ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ದೇಶ ಮುನ್ನಡೆಸುವುದನ್ನು ಜಗತ್ತಿನ ಜನರು ಎದುರು ನೋಡುತ್ತಿದ್ದಾರೆ’ ಎಂದು ಹೇಳಿದರು.

ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ‘ಈ ಚುನಾವಣೆ ದೇಶದ ಭವಿಷ್ಯ ನಿರ್ಧರಿಸುತ್ತದೆ. ಬಿಜೆಪಿಗೆ ಮತ ನೀಡಿ ದೇಶದ ಭದ್ರತೆಗೆ ಆದ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.

ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ದುಂಡಪ್ಪ ಭೆಂಡವಾಡೆ, ಮಾಜಿ ಶಾಸಕ ಬಾಳಾಸಾಹೇಬ ವಡ್ಡರ, ಶಾಂಭವಿ ಅಶ್ವತ್ಥಪುರ, ರಾಜೇಶ ನೆರ್ಲಿ, ಚಂದ್ರಶೇಖರ ಕವಟಗಿ ಇದ್ದರು.

ಇದಕ್ಕೂ ಮೊದಲು ಅಣ್ಣಾಸಾಹೇಬ ಜೊಲ್ಲೆ ಸೈಕಲ್ ರ್‍ಯಾಲಿಗೆ ಚಾಲನೆ ನೀಡಿದರು. ಪುರಸಭೆ ಸದಸ್ಯರು ಹಾಗೂ ನೂರಾರು ಯುವಕರು ಸಾಥ್ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT