ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ವಚನ ಕಟ್ಟು ರಕ್ಷಿಸಿದ ಮಾಚಿದೇವ’

ತಹಶೀಲ್ದಾರ ಎಮ್.ಎನ್. ಹೆಗ್ಗನ್ನವರ
Published 1 ಫೆಬ್ರುವರಿ 2024, 14:14 IST
Last Updated 1 ಫೆಬ್ರುವರಿ 2024, 14:14 IST
ಅಕ್ಷರ ಗಾತ್ರ

ಸವದತ್ತಿ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಲದಲ್ಲಿನ ವಚನ ಕಟ್ಟುಗಳನ್ನು ರಕ್ಷಿಸುವಲ್ಲಿ ಮಾಚಿದೇವ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಸಕಲ ಶರಣರ ವಸ್ತ್ರಗಳನ್ನು ಶುಚಿಗೊಳಿಸುವಲ್ಲಿ ತಲ್ಲೀನರಾಗಿದ್ದರು’ ಎಂದು ತಹಶೀಲ್ದಾರ್‌ ಎಂ.ಎನ್.ಹೆಗ್ಗನ್ನವರ ಹೇಳಿದರು.‌

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಿ ಮಾತನಾಡಿದ, ವಚನಗಳ ರಕ್ಷಣೆ ವೇಳೆ ಮಾಚಿದೇವರು ವೀರಭದ್ರನ ಅವತಾರ ತಾಳಿದ್ದು ವಿಶೇಷ. ಇಂದು ಮಡಿವಾಳ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಶ್ಲಾಘನೀಯವೆಂದರು.

ಶಾಸಕರ ಸಹೋದರ ಅಶ್ವತ್ ವೈದ್ಯ ಅವರು ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಎಂ.ಎನ್. ಗುಂಡಪ್ಪಗೋಳ, ಯಲ್ಲಪ್ಪ ಮಡಿವಾಳರ, ಅಜ್ಜಪ್ಪ ಮಡಿವಾಳರ, ರಾಜು ಮಡಿವಾಳರ, ಸುರೇಶ ಮಡಿವಾಳರ, ಬಸವರಾಜ ಮಡಿವಾಳರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT