ಸೋಮವಾರ, ಅಕ್ಟೋಬರ್ 26, 2020
28 °C

ಮಹದಾಯಿ ಯೋಜನೆ ಮುಂದುವರಿಸುತ್ತೇವೆ: ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ನನ್ನ ಪ್ರಕಾರ ಮಹದಾಯಿ ವಿವಾದ ತಾರ್ಕಿಕ‌ ಅಂತ್ಯ ಕಂಡಿದೆ. ನ್ಯಾಯಮಂಡಳಿ ತೀರ್ಪಿನ ಪ್ರಕಾರ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರು ಪಡೆಯಲು ಕ್ರಮ ವಹಿಸಲಾಗಿದೆ. ಕೇಂದ್ರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಯೋಜನೆ
ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ₹ 500 ಕೋಟಿ ಮೀಸಲಿಟ್ಟಿದೆ. ಯಾವುದೇ ಯೋಜನೆಗೆ ಪರಿಸರ ಅನುಮತಿ ಕಡ್ಡಾಯ. ಹೀಗಾಗಿ, ರಾಜ್ಯ ಸರ್ಕಾರದಿಂದ ಅನುಮತಿ ಕೋರಲಾಗಿದೆ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಗೋವಾ: ಪಣಜಿ (ಪಿಟಿಐ): ‘ಮಹದಾಯಿ ವಿವಾದ ಕೋರ್ಟ್‌ನಲ್ಲಿದ್ದರೂ ನದಿ ನೀರು ಹರಿಯುವ ದಿಕ್ಕು ಬದಲಿಸಲು ಕರ್ನಾಟಕ ಯತ್ನಿಸುತ್ತಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಸಲ್ಲಿಸಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು