ಬೆಳಗಾವಿ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಡಿ. 28ರಂದು ಬೆಳಿಗ್ಗೆ 10ಕ್ಕೆ ಮಹದಾಯಿ ಹೋರಾಟಗಾರರ ಸಭೆ ಕರೆಯಲಾಗಿದೆ.

‘ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಕೇಂದ್ರ ಪರಿಸರ ಸಚಿವಾಲಯ ನೀಡಿದ ಅನುಮತಿ ತಡೆಹಿಡಿದು, ಅಧಿಸೂಚನೆ ಹೊರಡಿಸಿದ ನಂತರ ಕಾಮಗಾರಿ ಪ್ರಾರಂಭಿಸಿ ಎಂದು ಪತ್ರ ಬರೆದು ರಾಜ್ಯಕ್ಕೆ ಅನ್ಯಾಯ ಮಾಡಿರುವುದನ್ನು ಖಂಡಿಸಿ ಮತ್ತು ನ್ಯಾಮಮಂಡಳಿ ಆದೇಶದ ಪ್ರಕಾರ ಅಧಿಸೂಚನೆ ಹೊರಡಿಸಲು ಒತ್ತಾಯಿಸಿ ಹೋರಾಟ ರೂಪಿಸುವುದಕ್ಕಾಗಿ ಚರ್ಚಿಸಲಾಗುವುದು. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ’ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.