ಶನಿವಾರ, ಮೇ 15, 2021
29 °C

ಮಹದಾಯಿ ಅಧಿಸೂಚನೆ; ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಮಹದಾಯಿ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದನ್ನು ಸ್ವಾಗತಿಸಿದ ಕಳಸಾ ಬಂಡೂರಿ ಹೋರಾಟಗಾರರು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಶುಕ್ರವಾರ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

‘ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನದಿ ನೀರು ಹಂಚಿಕೆ ಮಾಡಿ ಮಹದಾಯಿ ಜಲ ನ್ಯಾಯಮಂಡಳಿಯು ಐತೀರ್ಪು ನೀಡಿತ್ತು. ಈ ತೀರ್ಪಿನನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ, ಉತ್ತರ ಕರ್ನಾಟಕ ಭಾಗಕ್ಕೆ ಅದರಲ್ಲೂ ಮಹದಾಯಿ ಅಚ್ಚುಕಟ್ಟು ವ್ಯಾಪ್ತಿಯ ಜನಕ್ಕೆ ಸಿಹಿ ಸುದ್ದಿ ಕೊಟ್ಟಂತಾಗಿದೆ’ ಎಂದು ವಕೀಲರ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ ಹೇಳಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮಾತನಾಡಿ, ‘ನಾಲ್ಕು ದಶಕಗಳ ಹೋರಾಟದ ಫಲವಾಗಿ ಜಯ ಸಿಕ್ಕಿದೆ. ಇದಕ್ಕಾಗಿ ಸರ್ಕಾರ, ಶಾಸಕರು, ಜನಪ್ರತಿನಿಧಿಗಳ ಹೋರಾಟ ಮಾಡಿಲ್ಲ. ಸುಪ್ರೀಂ ಕೋರ್ಟ್‌ ನೀಡಿದ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೋರ್ಟ್‌ನಲ್ಲಿ ಮಹದಾಯಿ ಪರ ವಾದ ಮಂಡಿಸಿದ ರಾಜ್ಯದ ವಕೀಲರಿಗೆ ಧನ್ಯವಾದಗಳನ್ನು  ಅರ್ಪಿಸುತ್ತೇನೆ’ ಎಂದರು.  

ಪೊಲೀಸ್ ಸಿಬ್ಬಂದಿಗಳಿಗೂ ಸಿಹಿ ಹಂಚಿದರು. ಭಾರತೀಯ ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಸಿದಗೌಡ ಮೊದಗಿ, ಕನ್ನಡ ಪರ ಸಂಘಟನೆಯ ಮಹಾಂತೇಶ ರಣಗಟಿಮಠ, ದೀಪಕ ಗುಡಗನಟ್ಟಿ ಇತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು