ಶುಕ್ರವಾರ, ನವೆಂಬರ್ 22, 2019
26 °C

ಮಹದಾಯಿ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲು ಆಗ್ರಹ

Published:
Updated:

ಬೆಳಗಾವಿ: ಮಹದಾಯಿ ನದಿ ನೀರಿನ ಹಂಚಿಕೆಯ ವಿವಾದವನ್ನು ಸುಪ್ರೀಂ ಕೋರ್ಟ್‌ನ ಹೊರಗೆ ಬಗೆಹರಿಸುವ ಸಲುವಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆಗ್ರಹಿಸಿದೆ.

‘ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಮುಖ್ಯಮಂತ್ರಿಗಳ ಸಭೆಯನ್ನು ತುರ್ತಾಗಿ ಕರೆಯಬೇಕು ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.

‘ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ನೆರವು ಬಿಡುಗಡೆ ಮಾಡುವಂತೆಯೂ ಒತ್ತಾಯಿಸಿ ಪತ್ರ ಬರೆಯಲಾಗಿದೆ’ ಎಂದಿದ್ದಾರೆ.

ಪ್ರತಿಕ್ರಿಯಿಸಿ (+)