ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ನದಿ ನೀರು ಹಂಚಿಕೆ ವಿವಾದ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮನವಿ

Last Updated 25 ನವೆಂಬರ್ 2020, 14:18 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಕರ್ನಾಟಕ ಹಾಗೂ ಗೋವಾ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು, ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗಬೇಕು’ ಎಂದು ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಕೋರಿದ್ದಾರೆ.

ಪಣಜಿಯಲ್ಲಿ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಬುಧವಾರ ಭೇಟಿಯಾಗಿ ಅವರು ಚರ್ಚಿಸಿದರು.

25 ನಿಮಿಷಗಳವರೆಗೆ ಮಾತುಕತೆ ನಡೆಸಿದ ಅವರು, ‘ಉಭಯ ರಾಜ್ಯಗಳ ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸೂಕ್ತ’ ಎಂದು ತಿಳಿಸಿದ್ದಾರೆ.

ಇದಕ್ಕೆ ಆ ರಾಜ್ಯದ ಮುಖ್ಯಮಂತ್ರಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT