ಶುಕ್ರವಾರ, ಫೆಬ್ರವರಿ 28, 2020
19 °C

ಕೆಎಲ್‌ಇ ಅಧ್ಯಕ್ಷರಾಗಿ ಮಹಾಂತೇಶ ಕೌಜಲಗಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಇಲ್ಲಿ ಕೇಂದ್ರ ಸ್ಥಾನ ಹೊಂದಿರುವ ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್‌ಇ) ಸೊಸೈಟಿಯ ನೂತನ ಅಧ್ಯಕ್ಷರಾಗಿ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ ಕೌಜಲಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದರು.

‘ಇಬ್ಬರು ಉಪಾಧ್ಯಕ್ಷರು ಮತ್ತು 12 ಆಡಳಿತ ಮಂಡಳಿ ಸದಸ್ಯರು ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತತ 3ನೇ ಬಾರಿಗೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆದಿವೆ. ಮುಂದಿನ ಐದು ವರ್ಷಗಳವರೆಗೆ ಇವರೆಲ್ಲರ ಅಧಿಕಾರದ ಅವಧಿ ಇರುತ್ತದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಉಪಾಧ್ಯಕ್ಷರಾಗಿ ರಾಜೇಂದ್ರ ಹಂಜಿ, ಬಸವರಾಜ ತಟವಟಿ, ಆಡಳಿತ ಮಂಡಳಿ ಸದಸ್ಯರಾಗಿ ಪ್ರಭಾಕರ ಕೋರೆ, ಪ್ರವೀಣ ಬಾಗೇವಾಡಿ, ಮಹಾಂತೇಶ ಕವಟಗಿಮಠ, ಅಮಿತ ಕೋರೆ, ಶ್ರೀಶೈಲಪ್ಪ ಮೆಟಗುಡ್‌, ಜಯಾನಂದ ಮುನವಳ್ಳಿ, ಶಂಕರಣ್ಣ ಮುನವಳ್ಳಿ, ಬಸವರಾಜ ಪಾಟೀಲ, ಡಾ.ವಿಶ್ವನಾಥ ಪಾಟೀಲ, ಯಲ್ಲನಗೌಡ ಪಾಟೀಲ, ಅನಿಲ ಪಟ್ಟೇದ ಹಾಗೂ ಡಾ.ವಿರೂಪಾಕ್ಷಿ ಸಾಧುನವರ ಆಯ್ಕೆಯಾಗಿದ್ದಾರೆ. ಹೀಗಾಗಿ, ಫೆ. 29ರಂದು ಹುಬ್ಬಳ್ಳಿಯ ಬಿ.ವಿ. ಭೂಮರೆಡ್ಡಿ ತಾಂತ್ರಿಕ ಕಾಲೇಜು ಮತ್ತು ಮಾರ್ಚ್‌ 1ರಂದು ಬೆಳಗಾವಿಯ ಲಿಂಗರಾಜ ಕಾಲೇಜು ಆವರಣದಲ್ಲಿ ನಿಗದಿಯಾಗಿದ್ದ ಮತದಾನವನ್ನು ರದ್ದುಪಡಿಸಲಾಗಿದೆ. ಮಾರ್ಚ್‌ 1ರಂದು ಸರ್ವ ಸದಸ್ಯರ ಸಭೆಯ ಬಳಿಕ ನೂತನ ಕಾರ್ಯಾಧ್ಯಕ್ಷರನ್ನು ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

ಈವರೆಗೆ ಮಹಾಂತೇಶ ಅವರ ತಂದೆ, ಮಾಜಿ ಸಚಿವ ಶಿವಾನಂದ ಕೌಜಲಗಿ ಅಧ್ಯಕ್ಷರಾಗಿದ್ದರು. ಅದಕ್ಕಿಂತಲೂ ಹಿಂದೆ ಅವರ ತಾತ ಎಚ್‌.ವಿ. ಕೌಜಲಗಿ ಈ ಸ್ಥಾನದಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು