ಸೋಮವಾರ, ನವೆಂಬರ್ 30, 2020
19 °C

ಕರ್ನಾಟಕದ ವಾಹನ ಸಂಚಾರಕ್ಕೆ ನಿರ್ಬಂಧ: ಮೆಹಬೂಬ್ ಶೇಖ್ ಹೇಳಿಕೆ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳು ಸಂಚರಿಸಲು ಬಿಡುವುದಿಲ್ಲ’ ಎಂದು ಎನ್‌ಸಿಪಿ‌ ಯುವ ಘಟಕದ ಅಧ್ಯಕ್ಷ ಮೆಹಬೂಬ್ ಶೇಖ್ ಮುಂಬೈನಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

‘ಬೆಳಗಾವಿಯಲ್ಲಿ ನಮ್ಮ ಉಪ ಮುಖ್ಯಮಂತ್ರಿಯನ್ನು ಅವಮಾನಿಸಲಾಗಿದೆ. ಹೀಗಾಗಿ, ಪ್ರತಿಭಟಿಸಿದ ಸಂಘಟನೆ  ಹಾಗೂ ಕರ್ನಾಟಕ ಮುಖ್ಯಮಂತ್ರಿಗೆ ಈ ಮೂಲಕ ಎಚ್ಚರಿಸುತ್ತಿದ್ದೇನೆ. ಕರ್ನಾಟಕದ ಯಾವುದೇ ವಾಹನಗಳು ಬಂದರೂ ಅವುಗಳನ್ನು ಮಹಾರಾಷ್ಟ್ರ ಪ್ರವೇಶಿಸದಂತೆ ತಡೆಯುತ್ತೇವೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮೊದಲಾದ ಪ್ರದೇಶ ಸೇರಿಸಿ ಸಂಯುಕ್ತ ಮಹಾರಾಷ್ಟ್ರ ಮಾಡುವುದು ನಮ್ಮ ಕನಸು’ ಎಂದಿದ್ದಾರೆ.

‘ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು’ ಎಂದು ಆ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.