ಭಾನುವಾರ, ಫೆಬ್ರವರಿ 23, 2020
19 °C

ಕುಮಠಳ್ಳಿಗೆ ಯೋಗ್ಯ ಸ್ಥಾನಮಾನ ಸಿಗುವ ಭರವಸೆ: ಶ್ರೀಮಂತ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಉಪಚುನಾವಣೆಯಲ್ಲಿ ಗೆದ್ದಿರುವ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರಿಗೂ ಯೋಗ್ಯ ಸ್ಥಾನಮಾನ ನೀಡುವುದಾಗಿ ಪಕ್ಷದ ಹೈಕಮಾಂಡ್ ಭರವಸೆ ನೀಡಿದೆ. ಸದ್ಯದಲ್ಲಿಯೇ ಅವರಿಗೂ ಸಿಗಬಹುದು’ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.

ಇಲ್ಲಿಗೆ ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನಗೆ ಜವಳಿ ಹಾಗೂ ಅಲ್ಪಸಂಖ್ಯಾತ ಖಾತೆ ನೀಡಿದ್ದಾರೆ. ಜವಳಿ ಖಾತೆಯಲ್ಲಿ ಕೆಲಸ ಮಾಡಲು ಸಾಕಷ್ಟು ಅವಕಾಶಗಳಿವೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳಿವೆ. ಅವರಿಗೆ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದರು. 

‘ಎಲ್ಲ ಖಾತೆಗಳು ಒಳ್ಳೆಯದಾಗಿವೆ. ಕೆಲಸ ಮಾಡಲು ಅವಕಾಶ ಇದ್ದೇ ಇರುತ್ತದೆ’ ಎಂದು ತಿಳಿಸಿದರು.

‘ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸುವ ಬಗ್ಗೆ ಹಾಗೂ ಯಾರಿಗೆ ನೀಡಬೇಕು ಎನ್ನುವುದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು