ಗುರುವಾರ , ಆಗಸ್ಟ್ 5, 2021
28 °C

ರಮೇಶ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ: ಮಹೇಶ ಕುಮಠಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ (ಬೆಳಗಾವಿ ಜಿಲ್ಲೆ): ‘ಶಾಸಕ ರಮೇಶ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ವಿಚಾರ ನನಗೆ ಗೊತ್ತಿಲ್ಲ’ ಎಂದು ಅಥಣಿ ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ರಮೇಶ ಜೊತೆ ಮುಂಬೈಗೆ ಹೋಗಿಲ್ಲ. ಬೆಂಗಳೂರಲ್ಲಿದ್ದೆ. ಬೆಳಿಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜೀನಾಮೆ ಕೊಡುವುದಾಗಿ ಅವರು ನನ್ನೊಂದಿಗೆ ಅಥವಾ ಮಾಧ್ಯಮದ ಮುಂದೆಯೂ ಹೇಳಿಲ್ಲ. ಊಹಾ‍ಪೋಹಗಳು ಹರಿದಾಡುತ್ತಿರುವುದನ್ನು ನಾನೂ ಮಾಧ್ಯಮದಲ್ಲಿ ಗಮನಿಸಿದೆ’ ಎಂದು ಪ್ರತಿಕ್ರಿಯಿಸಿದರು.

‘ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರದ ಅವಧಿ ಪೂರೈಸಲಿದ್ದಾರೆ. ಈ ವಿಷಯದಲ್ಲಿ ಗೊಂದಲವಿಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು