ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸತತ ಪ್ರಚಾರ, ಪ್ರವಾಸದಲ್ಲಿ ತೊಡಗಿದ್ದ ಅಭ್ಯರ್ಥಿಗಳು ಮತದಾನದ ಮರು ದಿನವಾದ ಭಾನುವಾರ ವಿಶ್ರಾಂತಿ ಪಡೆದರು.

ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಇಲ್ಲಿನ ವಿಶ್ವೇಶ್ವರಯ್ಯ ನಗರದ ನಿವಾಸದಲ್ಲಿ ಪುತ್ರಿಯರಾದ ಶ್ರದ್ಧಾ ಶೆಟ್ಟರ್, ಡಾ.ಸ್ಫೂರ್ತಿ ಪಾಟೀಲ ಮತ್ತು ಮೊಮ್ಮಗಳೊಂದಿಗೆ ಸಮಯ ಕಳೆದರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಉಪ ಚುನಾವಣೆಯಾದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿಲ್ಲ. ನಾನೂ ಬಹಳಷ್ಟು ಮತಗಟ್ಟೆಗಳಿಗೆ ಭೇಟಿ ನೀಡಿದ್ದೆ. ಜನರ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಕೇಂದ್ರ ಮತ್ತು ರಾಜ್ಯದ ನಾಯಕರು ಸಕ್ರಿಯವಾಗಿ ಪ್ರಚಾರ ಮಾಡಿದ್ದಾರೆ. ಮತದಾರರು ನನ್ನನ್ನು ಆಶೀರ್ವದಿಸಿದ್ದಾರೆ ಎಂಬ ವಿಶ್ವಾಸವಿದೆ’ ಎಂದು ತಿಳಿಸಿದರು.

ಕಾಂಗ್ರೆಸ್ನ ಸತೀಶ ಜಾರಕಿಹೊಳಿ ಗೋಕಾಕದ ತಮ್ಮ ಮನೆ ‘ಹಿಲ್ಗಾರ್ಡನ್’ನಲ್ಲಿ ವಿರಮಿಸಿದರು. ಕೆಲ ಕಾಲ ಕಾರ್ಯಕರ್ತರು, ಬೆಂಬಲಿಗರನ್ನು ಭೇಟಿಯಾಗಿ ಮತ ಗಳಿಕೆಯ ಬಗ್ಗೆ ಮಾಹಿತಿ ಕಲೆ ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.