ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸಂಭ್ರಮದ ಮಕರ ಸಂಕ್ರಮಣಕ್ಕೆ ಸಜ್ಜು

Published 14 ಜನವರಿ 2024, 14:50 IST
Last Updated 14 ಜನವರಿ 2024, 14:50 IST
ಅಕ್ಷರ ಗಾತ್ರ

ಬೆಳಗಾವಿ: ಬರದ ಬವಣೆ ಮಧ್ಯೆಯೂ ಜಿಲ್ಲೆಯಲ್ಲಿ ಸೋಮವಾರ ಸಂಭ್ರಮದಿಂದ ಸಂಕ್ರಮಣ ಆಚರಿಸಲು ಜನರು ಸಜ್ಜಾಗಿದ್ದಾರೆ. ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಸ್ಥಳಗಳಲ್ಲಿ ನಡೆಯಲಿರುವ ಜಾತ್ರೆಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಸಮೂಹ ಸೇರಲಿದೆ.

ಸಂಕ್ರಾಂತಿ ಅಂಗವಾಗಿ ಕೆಲವರು ಮಲಪ್ರಭಾ, ಘಟಪ್ರಭಾ, ಕೃಷ್ಣಾ ಮತ್ತಿತರ ನದಿಗಳ ತೀರದಲ್ಲಿರುವ ದೇವಸ್ಥಾನಗಳಿಗೆ ಹೋಗಿ ಪುಣ್ಯಸ್ನಾನ ಮಾಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ‍ವಿವಿಧ ಜಲಾಶಯಗಳು, ಪ್ರೇಕ್ಷಣೀಯ ಸ್ಥಳಗಳು ಮತ್ತು ಕೃಷಿಭೂಮಿಗಳತ್ತ ಮುಖಮಾಡಲಿದ್ದಾರೆ. ಅಲ್ಲಿ ಕುಟುಂಬಸ್ಥರು, ಸ್ನೇಹಿತರು ಒಟ್ಟಾಗಿ ಭೋಜನ ಸವಿದು ಸಂಭ್ರಮಿಸಲಿದ್ದಾರೆ.

ಹಬ್ಬದ ಮುನ್ನಾ ದಿನವಾದ ಭಾನುವಾರ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಹೂವು, ಹಣ್ಣು, ಎಳ್ಳು–ಬೆಲ್ಲ, ಪೂಜಾ ಸಾಮಗ್ರಿಗಳು ಮತ್ತು ಆಲಂಕಾರಿಕ ಸಾಮಗ್ರಿಗಳನ್ನು ಜನರು ಖರೀದಿಸಿದರು. ಈ ವರ್ಷ ವಿವಿಧ ವಸ್ತುಗಳ ದರ ಏರಿಕೆಯಾಗಿದ್ದು, ಚೌಕಾಸಿ ಮಧ್ಯೆಯೂ ಜನರು ಖರೀದಿಸುತ್ತಿರುವುದು ಕಂಡುಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT