ಶನಿವಾರ, ಡಿಸೆಂಬರ್ 4, 2021
20 °C

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.

‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಯಲ್ಲಮ್ಮನಗುಡ್ಡದ ಅಭಿವೃದ್ಧಿ ಚಟುವಟಕೆಗಳಿಗೆ ವೇಗ ನೀಡಲು ನನಗೆ ಸರ್ಕಾರ ಅವಕಾಶ ಕೊಟ್ಟಿದೆ. ಹೆಚ್ಚಿನ ಅನುದಾನ ತಂದು ಪ್ರಗತಿಗೆ ಕ್ರಮ ವಹಿಸುವೆ’ ಎಂದು ಮಾಮನಿ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು