ಬುಧವಾರ, ಡಿಸೆಂಬರ್ 8, 2021
25 °C

ಬೆಳಗಾವಿಯಲ್ಲಿ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮಾಜಿ ಯೋಧರೊಬ್ಬರು ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ‌ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಆ ಗ್ರಾಮದ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11) ಮತ್ತು ಸೃಜನ್ ಹಾದಿಮನಿ (8) ಮೃತರು.

ಗೋಪಾಲ್‌ ಅವರ ಪತ್ನಿ ಜಯಾ ಕಪ್ಪು ಶಿಲೀಂಧ್ರ ಸೋಂಕಿನಿಂದ ಜುಲೈ‌ 6ರಂದು ಮೃತರಾಗಿದ್ದರು. ಇದರಿಂದ ಗೋಪಾಲ್ ನೊಂದಿದ್ದರು ಎನ್ನಲಾಗುತ್ತಿದೆ. ಮನೆಯಲ್ಲಿ ವಿಷ ಸೇವಿಸಿ ಮಕ್ಕಳಿಗೂ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಗೋಪಾಲ ಹಾದಿಮನಿ ನಿವೃತ್ತ ಯೋಧ ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು