ಶನಿವಾರ, ಅಕ್ಟೋಬರ್ 8, 2022
21 °C

ರಾಮದುರ್ಗ: ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮದುರ್ಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪೂಲ್ ಕೆಳಗೆ ಬಿಸಾಕಲಾಗಿದೆ.

ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಬೇರೆಡೆ ಕೊಲೆಗೈದು ಹೊಸೂರ ಹಳ್ಳದ ಬಳಿ ಶವ ಎಸೆಯಲಾಗಿದೆ. ವ್ಯಕ್ತಿಯ ಮೈತುಂಬ ಮಾರಕಾಸ್ತ್ರಗಳಿಂದ ಕೊಚ್ಚಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಜನ ಬೆಚ್ಚಿದರು. ಸ್ಥಳದಲ್ಲಿ ಅವರ ಬೈಕ್ ಕೂಡ ಇದೆ.

ಕಟಕೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ರಾಮದುರ್ಗ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಯಿತು.

ಕೊಲೆಗೆ ಕಾರಣ ಹಾಗೂ ಆರೋಪಿಗಳ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು