ಬೆಳಗಾವಿ: ಇಲ್ಲಿನ ಶಿವಬಸವ ನಗರದಲ್ಲಿ ಬುಧವಾರ ರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ.
ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಮೃತರು.
ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು.
'ಕೊಲೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದೇವೆ' ಎಂದು ಮಾಳಮಾರುತಿ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.