ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹದಲ್ಲಿ ಕೊಚ್ಚಿ ಹೋಗಿ ಮರದಲ್ಲಿ ಕುಳಿತಿದ್ದ ವ್ಯಕ್ತಿಯ ರಕ್ಷಣೆ

Last Updated 5 ಆಗಸ್ಟ್ 2020, 15:53 IST
ಅಕ್ಷರ ಗಾತ್ರ

ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ ನದಿಯಲ್ಲಿ ಬುಧವಾರ ಉಂಟಾದ ಪ್ರವಾಹದಿಂದ ಕೊಚ್ಚಿ ಹೋಗಿ ಖಾನಾಪುರ ತಾಲ್ಲೂಕಿನ ಕಪೋಲಿ ಗ್ರಾಮದ ಹೊರವಲಯದ ಸುಮಾರು 3 ಗಂಟೆಗಳವರೆಗೆ ಮರದಲ್ಲಿ ಕುಳಿತಿದ್ದ 60 ವರ್ಷದ ವೃದ್ಧನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಬಳಿಕ ರಕ್ಷಿಸಿದ್ದಾರೆ.

‘ಜಮೀನಿನಿಂದ ವಾಪಸ್‌ ಆಗುವಾಗ ಅವರು ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಒಂದು ಕಿ.ಮೀ.ವರೆಗೆ ಈಜಿಕೊಂಡು ಹೋಗಿ ಮರವೇರಿ ಕುಳಿತಿದ್ದಾರೆ. ಇದನ್ನು ನಂತರ ಗಮನಿಸಿದ ಸಾರ್ವಜನಿಕರು ತಹಶೀಲ್ದಾರ್‌ ಕಚೇರಿಗೆ ಕರೆ ಮಾಡಿ ತಿಳಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಅವರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ’ ಎಂದು ತಹಶೀಲ್ದಾರ್‌ ರೇಷ್ಮಾ ತಾಳಿಕೋಟೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT