ಶನಿವಾರ, ಸೆಪ್ಟೆಂಬರ್ 19, 2020
22 °C

ಮಣಗುತ್ತಿ: ಶಿವಾಜಿ ಪ್ರತಿಮೆ ವಿವಾದ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದಲ್ಲಿ ಉಂಟಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ತೆರವು ವಿವಾದ ಬಗೆಹರಿದಿದೆ.

ಗ್ರಾಮದಲ್ಲಿ ಮಂಗಳವಾರ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಸೇರಿದ್ದ ವಿವಿಧ ಸಮುದಾಯಗಳ ಮುಖಂಡರು, ಹೋದ ವರ್ಷ ಚರ್ಚೆಯಾಗಿದ್ದಂತೆ ಶಿವಾಜಿ, ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್, ವಾಲ್ಮೀಕಿ ಹಾಗೂ ಶ್ರೀಕೃಷ್ಣ ಪ್ರತಿಮೆಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪಿಸುವ ಬಗ್ಗೆ ತೀರ್ಮಾನಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಗುತ್ತಿ, ಬೊಶ್ಯಾನಹಟ್ಟಿ, ಬೆನಕನಹೊಳಿ ಮುಖಂಡರು ಪಾಲ್ಗೊಂಡಿದ್ದರು.

ಗ್ರಾಮದ ಹೊರವಲಯದ ಬಸವಣ್ಣ ಗುಡಿಯ ಸಮೀಪದ ಜಾಗದಲ್ಲಿ ಪ್ರತಿಷ್ಠಾಪನೆಗೆ ತೀರ್ಮಾನಿಸಲಾಯಿತು. ಸಭೆ ಬಳಿಕ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲು ನಿಗದಿಪಡಿಸಿದ ಜಾಗದಲ್ಲಿ ಮುಖಂಡರು ಭೂಮಿ ಪೂಜೆಯನ್ನೂ ನೆರವೇರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು