ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿರುವ ಮರಾಠಿ ಭಾಷಿಗರಿಗೆ ನ್ಯಾಯ ಸಿಗಬೇಕು: ಶುಭಂ ಶೆಳಕೆ ವಿವಾದಿತ ಪೋಸ್ಟ್

Last Updated 2 ಮೇ 2022, 7:59 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಯನ್ನು ಸೇರಿಸಿಕೊಂಡು ಸಂಯುಕ್ತ ಮಹಾರಾಷ್ಟ್ರ ರಚನೆಯಾಗಬೇಕು. ಗಡಿಯಲ್ಲಿರುವ ಮರಾಠಿ ಭಾಷಿಗರಿಗೆ ನ್ಯಾಯ ಸಿಗಬೇಕು’ ಎಂದು ಇಲ್ಲಿನ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಯುವ ಘಟಕದ ಅಧ್ಯಕ್ಷ ಶುಭಂ ಶೆಳಕೆ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಗಡಿ ವಿವಾದವನ್ನು ಮತ್ತೊಮ್ಮೆ ಕಣಕಿದ್ದಾರೆ.

ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೊ ಮಾಡಿ ಪೋಸ್ಟ್ ಹಾಕಿದ್ದಾರೆ. ಭಾಷಾ ಸಾಮರಸ್ಯ ಕದಡುವ ಪ್ರಯತ್ನ ನಡೆಸಿದ್ದಾರೆ.

‘ಕಟ್ಟಾ ಮಹಾರಾಷ್ಟ್ರವಾದಿಗಳಾಗಿರುವ ನಾವು ಮಹಾರಾಷ್ಟ್ರ ದಿನದಂದು ಮುಕ್ತವಾಗಿ ಶುಭಾಶಯ ಹೇಳುವ ಸ್ಥಿತಿಯಲ್ಲಿಲ್ಲ. ಸಂಯುಕ್ತ ಮಹಾರಾಷ್ಟ್ರಕ್ಕಾಗಿ ನಡೆದ ಚಳವಳಿಯಲ್ಲಿ ರಕ್ತ ನೆಲಕ್ಕೆ ಬಿದ್ದು 66 ವರ್ಷಗಳಾಗಿವೆ. ಬೆಳಗಾವಿಯ ಗಡಿಯಲ್ಲಿರುವ ನಿವಾಸಿಗಳು ಇಂದಿಗೂ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಲ್ಲಿ ವಿವಾದಿತ ನಕ್ಷೆಯನ್ನು ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT