ಶುಕ್ರವಾರ, ಮಾರ್ಚ್ 5, 2021
17 °C

ಬೆಳಗಾವಿ: ಸಚಿವರಿಂದ ಸರಣಿ ಸಭೆಗಳು ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಜುಲೈ 5ರಂದು ನಗರದಲ್ಲಿ ಸರಣಿ ಸಭೆಗಳನ್ನು ನಡೆಸಿ, ಇಲ್ಲಿಯೇ ತಂಗುವರು.

ಬೆಳಿಗ್ಗೆ 9ರಿಂದ ಸ್ಮಾರ್ಟ್‌ ಸಿಟಿ (ಕೆಯುಐಡಿಎಫ್‌ಸಿ), ನಗರಪಾಲಿಕೆ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸುವರು. ನಗರಪಾಲಿಕೆ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ಸ್ಮಾರ್ಟ್‌ ಸಿಟಿ ಯೋಜನೆಯ ಪ್ರಗತಿ ಪರೀಶೀಲನೆ ನಡೆಸುವರು. ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ನಂತರ, ನಗರಪಾಲಿಕೆ ಯೋಜನೆಗಳ ಪ್ರಗತಿ ಪರಿಶೀಲಿಸುವರು.

ಮಧ್ಯಾಹ್ನ 2.30ರಿಂದ ಬುಡಾದಿಂದ ಕೈಗೊಂಡಿರುವ ಕಾಮಗಾರಿಗಳ ಮಾಹಿತಿ ಪಡೆಯುವರು; ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಂಜೆ 5ರಿಂದ ಕೆಯುಐಡಿಎಫ್‌ಸಿ, ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಸಂಜೆ 6ಕ್ಕೆ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡುವರು. ಜುಲೈ 6ರಂದು ಬೆಳಿಗ್ಗೆ 7ಕ್ಕೆ ಹುಬ್ಬಳ್ಳಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು